ಬೆಂಗಳೂರು: ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಇನ್ನು ಕೆಲವೇ ವಾರಗಳು ಮಾತ್ರವೇ ಬಾಕಿಯಿದ್ದು, ಮೂರು ಬಾರಿಯ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಭಾರಿ ಆಘಾತ ಎದುರಾಗಿದ್ದು ಸ್ಟಾರ್ ಬ್ಯಾಟ್ಸ್‌ಮನ್ ಸುರೇಶ್ ರೈನಾ ಐಪಿಎಲ್ 2020 ಟೂರ್ನಿಯಿಂದ ಸಂಪೂರ್ಣವಾಗಿ ಹೊರಬಿದ್ದಿದ್ದಾರೆ.
ಆಗಸ್ಟ್ 15ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಹಠಾತ್ ನಿವೃತ್ತಿ ಘೋಷಿಸಿದ್ದ 33 ವರ್ಷದ ಎಡಗೈ ಬ್ಯಾಟ್ಸ್‌ಮನ್ ಸುರೇಶ್ ರೈನಾ, ವೈಯಕ್ತಿಕ ಕಾರಣಗಳಿಂದಾಗಿ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ ಎಂದು ಸಿಎಸ್‌ಕೆ ಸಿಇಒ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ.
ಅಂದಹಾಗೆ ರೈನಾ ಹಿಂದೆ ಸರಿಯಲುಇರುವ ನೈಜ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕೇವಲ ವೈಯಕ್ತಿಕ ಕಾರಣ ಎಂದಷ್ಟೇ ಹೇಳಲಾಗಿದೆ. ಆದರೆ, ಶುಕ್ರವಾರವಷ್ಟೇ ಚೆನ್ನೈ ಸೂಪ್ ಕಿಂಗ್ಸ್ ತಂಡದ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಯಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿತ್ತು. ಆಗಸ್ಟ್ 21ಕ್ಕೆ ದುಬೈ ತಲುಪಿದ್ದ ಸಿಎಸ್‌ಕೆ ಆಟಗಾರರು 6 ದಿನಗಳ ಕ್ವಾರಂಟೈನ್ ಬಳಿಕ ಅಭ್ಯಾಸಕ್ಕೆ ಮುಂದಾಗಿದ್ದರು. ನಂತರ ಕೆಲ ಆಟಗಾರರಲ್ಲಿ ಮತ್ತು ಸಹಾಯಕ ಸಿಬ್ಬಂದಿಯಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿದೆ.