Latest Posts

ಟೀಮ್ ಇಂಡಿಯಾಗೆ ಆಸ್ಟ್ರೇಲಿಯಾದ ನೆಲದಲ್ಲಿ ಭರ್ಜರಿ ಜಯ: ರಿಷಬ್ ಪಂತ್ ಪಂದ್ಯಶ್ರೇಷ್ಠ

32 ವರ್ಷಗಳ ನಂತರ ಆಸ್ಟ್ರೇಲಿಯಾದ ನೆಲದಲ್ಲಿ ಭಾರತಕ್ಕೆಸರಣಿ.ಗಾಯಗೊಂಡ ಭಾರತೀಯ ತಂಡವನ್ನು ಗೆಲುವಿನತ್ತ ತಲುಪುವಂತೆ ಮಾಡಿದ ಹೊಸ ತಲೆಮಾರಿನ ಯುವ ಆಟಗಾರರು.

ಐತಿಹಾಸಿಕ ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಭಾರತ ಜಯಗಳಿಸಿದೆ ಭಾರತ ಆಸ್ಟ್ರೇಲಿಯಾವನ್ನು ಮೂರು ವಿಕೆಟ್‌ಗಳಿಂದ ಸೋಲಿಸಿತು. 1988 ರಿಂದ ಬ್ರಿಸ್ಬೇನ್‌ನಲ್ಲಿ ಆಸ್ಟ್ರೇಲಿಯಾ ಇದುವರೆಗೂ ಸೋತಿಲ್ಲ. ಎರಡನೇ ಇನ್ನಿಂಗ್ಸ್‌ನಲ್ಲಿ ಶುಭಮನ್ ಗಿಲ್ (91), ಚೇತೇಶ್ವರ ಪೂಜಾರ ಮತ್ತು ರಿಷಭ್ ಪಂತ್ (91) ಭರ್ಜರಿ ಬ್ಯಾಟಿಂಗ್ ಪ್ರದರ್ಶನವಿತ್ತರು.

ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 336 ರನ್‌ಗಳಿಗೆ ಆಲೌಟ್ ಆಗಿದ್ದು, ಆಸ್ಟ್ರೇಲಿಯಾಕ್ಕಿಂತ 36 ರನ್‌ಗಳ ಹಿನ್ನಡೆಯಲ್ಲಿತ್ತು. ಆದಾಗ್ಯೂ, ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತೀಯ ಬೌಲರ್‌ಗಳು ಎಚ್ಚರಗೊಂಡು ಆಸ್ಟ್ರೇಲಿಯಾವನ್ನು 294 ರನ್‌ಗಳಿಗೆ ಆಲೌಟ್ ಮಾಡಿದರು. ಮೊಹಮ್ಮದ್ ಸಿರಾಜ್ (ಐದು) ಮತ್ತು ಶಾರ್ದುಲ್ ಠಾಕೂರ್ (ನಾಲ್ಕು) ಎರಡನೇ ಇನ್ನಿಂಗ್ಸ್‌ನಲ್ಲಿ ಪ್ರಮುಖ ಕೊಡುಗೆ ನೀಡಿದರು.