ಅಬುಧಾಬಿ: ಅಬುಧಾಬಿ ಎಮಿರೇಟ್‌ನಲ್ಲಿನ ಎಲ್ಲಾ ಆರ್ಥಿಕ, ಪ್ರವಾಸೋದ್ಯಮ, ಸಾಂಸ್ಕೃತಿಕ ಮತ್ತು ವಿರಾಮ ಚಟುವಟಿಕೆಗಳು ಎರಡು ವಾರಗಳಲ್ಲಿ ಪುನರಾರಂಭಗೊಳ್ಳಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನು ಪೂರ್ಣಗೊಳಿಸಲು ಅಬುಧಾಬಿ ತುರ್ತು ಬಿಕ್ಕಟ್ಟು ಮತ್ತು ವಿಪತ್ತು ಸಮಿತಿ ಸಂಬಂಧಿತ ಇಲಾಖೆಗಳೊಂದಿಗೆ ಸೇರಿ ಜಂಟಿಯಾಗಿ ಕೆಲಸ ಮಾಡುತ್ತಿದೆ.
ಕೋವಿಡ್ ಹರಡುವುದನ್ನು ನಿಯಂತ್ರಿಸಲು ಮತ್ತು ಕಡಿಮೆ ಕೋವಿಡ್ ದರವನ್ನು ಕಾಯ್ದುಕೊಳ್ಳಲು ಕೈಗೊಂಡ ಮುನ್ನೆಚ್ಚರಿಕೆ ಕ್ರಮಗಳ ಯಶಸ್ಸಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಬುಧಾಬಿ ಸರ್ಕಾರದ ಮಾಧ್ಯಮ ಕಚೇರಿ ಬುಧವಾರ ತಿಳಿಸಿದೆ. ಎಲ್ಲಾ ಆರ್ಥಿಕ, ಪ್ರವಾಸೋದ್ಯಮ, ಸಾಂಸ್ಕೃತಿಕ ಮತ್ತು ಮನರಂಜನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಪುನರಾರಂಭಿಸಲಾಗುವುದು ಎಂದು ಅಬುಧಾಬಿ ಮಾಧ್ಯಮ ಕಚೇರಿ ಟ್ವಿಟರ್‌ನಲ್ಲಿ ತಿಳಿಸಿದೆ, ಆದರೆ ಈಗಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಇನ್ನಷ್ಟು ಬಲಪಡಿಸಲಾಗುತ್ತದೆ ಎಂದು ವರದಿಯಲ್ಲಿ ತಿಳಿಸಿದ್ದಾರೆ .