Latest Posts

ಸಿದ್ದಿಕ್ ಕಪ್ಪನ್‌ಗೆ ಜಾಮೀನು ನಿರಾಕರಿಸಿದ ಮಥುರಾ ನ್ಯಾಯಾಲಯ

ನವದೆಹಲಿ: ಉತ್ತರ ಪ್ರದೇಶ ಪೊಲೀಸರು ಬಂಧಿಸಿರುವ ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರಿಗೆ ಮಥುರಾ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ಸಿದ್ದಿಕೀ ಕಾಪ್ಪನ್ ಅವರು ನಿಷೇಧಿತ ಸಿಮಿಯ ಹಿರಿಯ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಸಿಮಿಗೆ ಸಂಬಂಧಿಸಿದ ಕರಪತ್ರ,ಪುಸ್ತಕಗಳು ಕೈಯಲ್ಲಿತ್ತು ಎಂಬ ಕಾರಣಕ್ಕೆ ಜಾಮೀನು ನಿರಾಕರಿಸಲಾಗಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಅನಿಲ್ ಕುಮಾರ್ ಪಾಂಡೆ ಈ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ್ದಾರೆ.

2020 ರ ಅಕ್ಟೋಬರ್ 5 ರಂದು ಹತ್ರಾಸ್ ‌ನಲ್ಲಿ ನಡೆದ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಹತ್ಯೆಯ ಬಗ್ಗೆ ವರದಿ ಮಾಡಲು ತೆರಳುತ್ತಿದ್ದಾಗ ಪತ್ರಕರ್ತ ಸಿದ್ದೀಕ್ ಕಪ್ಪನ್ ಬಂಧಿಸಲಾಗಿತ್ತು.ಆರೋಪಗಳು ಆಧಾರರಹಿತವಾಗಿವೆ ಮತ್ತು ಎಫ್‌ಐಆರ್‌ನಲ್ಲಿ ಹೇಳಿದ್ದನ್ನು ಕಟ್ಟುಕಥೆ ಮಾಡಲಾಗಿದೆ ಎಂದು ಕಾಪ್ಪನ್ ಜಾಮೀನು ಅರ್ಜಿಯಲ್ಲಿ ತಿಳಿಸಿದ್ದರು.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದ ಕಾರ್ಯಕರ್ತರೊಂದಿಗೆ ಕಾರಿನಲ್ಲಿ ತೆರಲುತ್ತಿರುವ ವೇಳೆ ಬಂಧನಕ್ಕೆ ಒಳಗಾಗಿದ್ದರು.ಬಂಧನದ ವೇಳೆ ಕಾಪ್ಪನ್ ರವರಿಂದ ವಶಪಡಿಸಿಕೊಂಡ ದಾಖಲೆಗಳು ಕಾರ್ಯಚಟುವಟಿಕೆ ನಿಲ್ಲಿಸಿದ ಸಂಸ್ಥೆಯದ್ದಾಗಿದೆ ಎಂಬ ಪೋಲಿಸರ ವಾದವನ್ನು ನ್ಯಾಯಾಲಯವು ಒಪ್ಪಿಕೊಂಡಿದೆ.