Latest Posts

ರೈತ ಹೋರಾಟಕ್ಕೆ ಬೆದರಿದ ಮೋದಿ ಸರಕಾರ;ವಿವಾದಿದ ಮೂರು ಕೃಷಿ ಕಾಯ್ದೆ ರದ್ದು

ಹೊಸದಿಲ್ಲಿ: ರೈತರ ಮುಷ್ಕರದ ಒಂದನೇ ವರ್ಷ ಪೂರ್ತಿಯಾಗುವ ವೇಳೆಯಲ್ಲಿ ಕೇಂದ್ರ ಸರ್ಕಾರವು ಹಾಕಿದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆದಿದ್ದು, ಈ ತಿಂಗಳಾಂತ್ಯಕ್ಕೆ ಅದನ್ನು ರದ್ದುಗೊಳಿಸಲಾಗುವುದು ಎಂದು ಸ್ವತಃ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬಹುತೇಕ ರೈತರು ಬಡವರಾಗಿದ್ದು, ಅವರ ನೋವನ್ನು ಅರ್ಥ ಮಾಡಿಕೊಳ್ಳುತ್ತಿದ್ದೇವೆ ಎಂದು ಪ್ರಧಾನಿ ಭಾಷಣದಲ್ಲಿ ಹೇಳಿದರು. ರೈತರ ಅಭ್ಯುದಯಕ್ಕೆ ಪ್ರಾಮುಖ್ಯತೆ ನೀಡುವುದಾಗಿ ಹೇಳಿದ ಪ್ರಧಾನಿ, ವಿವಿಧ ಯೋಜನೆಗಳನ್ನು ಘೋಷಿಸಿದರು. ಅಧಿಕಾರಕ್ಕೆ ಬಂದ ನಂತರ ರೈತರ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸಿದ್ದು, ಕೇಂದ್ರ ಸಣ್ಣ ರೈತರಿಗೆ ನಾನಾ ಯೋಜನೆಗಳನ್ನು ಘೋಷಿಸಿದೆ ಎಂದರು. ಕಳೆದ ನಾಲ್ಕು ವರ್ಷಗಳಲ್ಲಿ, ಹೊಸ ಕಾನೂನುಗಳಿಂದ ರೈತರಿಗೆ ಹೆಚ್ಚುವರಿ ಆದಾಯವನ್ನು ಗಳಿಸಲು ಸಹಾಯ ಮಾಡಿದೆ. ರೈತರ ಕಲ್ಯಾಣಕ್ಕಾಗಿ ಮೊದಲ ಆದ್ಯತೆ ನೀಡಲಾಗಿತ್ತು. ರೈತರಿಗೆ ಒಂದು ಲಕ್ಷ ಕೋಟಿ ನಷ್ಟ ಪರಿಹಾರವಾಗಿ ನೀಡಲಾಗಿದೆ. ಹಿಂದಿನ ವರ್ಷಗಳಿಗಿಂತ ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಸಾಧ್ಯವಾಗಿದೆ. ರೈತರ ಕಲ್ಯಾಣಕ್ಕಾಗಿ ಸರ್ಕಾರ ಎಲ್ಲವನ್ನೂ ಮಾಡುತ್ತಿದೆ. ಬೆಂಬಲ ಬೆಲೆಯನ್ನು ಹೆಚ್ಚಿಸಲಾಯಿತು ಮತ್ತು ಬಜೆಟ್ ಕೋಟಾವನ್ನು ಐದು ಪಟ್ಟು ಹೆಚ್ಚಿಸಿತು. ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸರ್ಕಾರ ಎಲ್ಲವನ್ನು ಮಾಡುತ್ತಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು.

ಪಂಜಾಬ್ ಮತ್ತು ಹರಿಯಾಣದ ರೈತರು ಕಳೆದ ನವೆಂಬರ್‌ನಲ್ಲಿ ದೆಹಲಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು, ಇದು ರಾಷ್ಟ್ರವ್ಯಾಪಿ ರೈತರ ಆಂದೋಲನಕ್ಕೆ ನಾಂದಿ ಹಾಡಿತು. ಹರ್ಯಾಣ ಸರ್ಕಾರ ಮತ್ತು ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕುವ ಮೂಲಕ ರೈತರ ಹರಿವನ್ನು ತಡೆಯಲು ಪ್ರಯತ್ನಿಸಿದರೂ, ಆಂದೋಲನ ದೆಹಲಿ ಗಡಿಯವರೆಗೂ ವ್ಯಾಪಿಸಿತು. ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಮಹಿಳೆಯರು, ಮಕ್ಕಳು, ವೃದ್ಧರು ರಸ್ತೆಗಳಲ್ಲಿ ಟೆಂಟ್ ಹಾಕಿಕೊಂಡು ಧರಣಿ ಆರಂಭಿಸಿದರು. ಕಳೆದ ಒಂದು ವರ್ಷದಲ್ಲಿ ಸಾಕಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದ್ಯಾವುದಕ್ಕೂ ಜಗ್ಗದ ರೈತರು ಹಿಮ, ಮಳೆ, ಬಿಸಿಲನ್ನೂ ಲೆಕ್ಕಿಸದೆ ಹೋರಾಟ ಮುಂದುವರಿಸಿದ್ದರು.

ನಿರಂತರ ಪ್ರತಿಭಟನೆ ನಡೆಸುತ್ತಿದ್ದರೂ ರೈತ ಸಂಘಟನೆಗಳು ಹಾಗೂ ಕೇಂದ್ರ ಸರ್ಕಾರ ರಾಜಿಯಾಗುವ ಸೂಚನೆ ಕಂಡುಬಂದಿರಲಿಲ್ಲ.ಹಲವು ಬಾರಿ ಮಾತುಕತೆ ನಡೆಸಿದರೂ ವಿಫಲವಾಗಿತ್ತು. ಕಾನೂನುಗಳನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂಬ ನಿಯಮವನ್ನು ಕೇಂದ್ರ ಸರ್ಕಾರ ಬಿಗಿಗೊಳಿಸಿದ್ದರಿಂದ ರೈತರ ಆಂದೋಲನ ಮತ್ತೆ ತೀವ್ರಗೊಂಳಿಸಿತು.ಆದರೆ ಇಂದು ರೈತ ಹೋರಾಟಕ್ಕೆ ಮಣಿದ ಸರಕಾರ ವಿವಾದಿದ ಮೂರೂ ಕಾನೂನುಗಳನ್ನು ಹಿಂಪಡೆದಿರುವುದಾಗಿ ಪ್ರಧಾನಿ ಘೋಷಿಸಿದ್ದಾರೆ.