Latest Posts

ಗೋವಾ ರಾಜಕೀಯದಲ್ಲಿ ರೋಚಕ ಟ್ವಿಸ್ಟ್

ಬಿಜೆಪಿ ಮತ್ತು ಪಕ್ಷೇತರ ಇಬ್ಬರು ಶಾಸಕರ ಸಹಿತ ಬಿಜೆಪಿ ಯುವ ಮೋರ್ಚಾ ನಾಯಕ ಕಾಂಗ್ರೆಸ್ ಸೇರ್ಪಡೆ.

ಗೋವಾ: ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಗೋವಾ ರಾಜಕೀಯ ರೋಚಕ ತಿರುವು ಪಡೆದುಕೊಂಡಿದೆ.
ಒಬ್ಬ ಪಕ್ಷೇತರ ಶಾಸಕ ಸಹಿತ ಗೋವಾ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದ ಕಲಂಗುಟ್ಟೆ ಕ್ಷೇತ್ರದ ಬಿಜೆಪಿಯ ಶಾಸಕ ಮಿಕಾಯಿಲ್ ಲೋಬೊ ಹಾಗೂ ಮತ್ತೋರ್ವ ಮಹೀಮ್ ಕ್ಷೇತ್ರದ ಬಿಜೆಪಿ ಶಾಸಕ ಪ್ರವೀಣ್ ಝಾಂತ್ಯೆ ಇಂದು ತನ್ನ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಶೀಘ್ರದಲ್ಲೇ ಕಾಂಗ್ರೆಸ್ ಸೇರುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಸಾಂಗ್ವೆಮ್ ಕ್ಷೇತ್ರದ ಪಕ್ಷೇತರ ಶಾಸಕ ಪ್ರಸಾದ್ ಗಾಂವ್ಕರ್ ಹಾಗೂ
ವರ್ಷಗಳ ಕಾಲ ಬಿಜೆಪಿ ಯುವ ಘಟಕದಲ್ಲಿ ಮಂಚೂಣಿಯಲ್ಲಿದ್ದ ಯುವ ನಾಯಕ ಗಜಾನನ್ ತಿಲ್ವೆ ಅವರು ಅಧಿಕೃತವಾಗಿ ಇಂದು ಗೋವಾ ಕಾಂಗ್ರೆಸ್ ಉಸ್ತುವಾರಿಗಳ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಇಬ್ಬರು ಬಿಜೆಪಿ ಶಾಸಕರ ಸರಣಿ ರಾಜಿನಾಮೆ ಪರ್ವ ಸಹಜವಾಗಿ ಬಿಜೆಪಿ ಪಾಳಯದಲ್ಲಿ ತೀವ್ರ ನಿರಾಸೆ ಮೂಡಿಸಿದೆ ಹಾಗೂ ಮತ್ತೆ ಅಧಿಕಾರದ ಗದ್ದುಗೆ ಏರುವ ಬಿಜೆಪಿಯ ಆತ್ಮವಿಶ್ವಾಸಕ್ಕೆ ಕೊಡಲಿಯೇಟು ಬಿದ್ದಂತಾಗಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಮತ್ತೆ ಗೋವಾದಲ್ಲಿ ಅಧಿಕಾರ ಹಿಡಿಯಲಿದೆ ಎಂದು ಕೂಡ ರಾಜಕೀಯ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗುತ್ತಿದೆ.